ನವದೆಹಲಿ: ರಾಹುಲ್ ಗಾಂಧಿ ಅವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಕೇಂದ್ರ ಸಚಿವ ಜಿತಿನ್ ಪ್ರಸಾದ ಕಾಂಗ್ರೆಸ್ ತೊರೆದು ಬಿಜೆಪಿಯನ್ನು ಸೇರಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಶ್ ಗೋಯಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ಸಿನ ಬ್ರಾಹ್ಮಣ ಮುಖಂಡ ಎಂದೇ ಬಿಂಬಿತವಾಗಿದ್ದ ಜಿತಿನ್ ಪ್ರಸಾದ ಬಿಜೆಪು ಸೇರ್ಪಡೆಯಿಂದ ಕಾಂಗ್ರೆಸ್ ಭಾರೀ ಹಿನ್ನಡೆಯಾಗುವ ಸಾಧ್ಯತೆಯಿದೆ.
ಜಿತಿನ್ ಪ್ರಸಾದ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಮೊದಲ ಅವಧಿಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆಯ ರಾಜ್ಯ ಸಚಿವರಾಗಿದ್ದರೆ ಎರಡನೇ ಅವಧಿಯಲ್ಲಿ ಉಕ್ಕು ಖಾತೆಯ ರಾಜ್ಯ ಸಚಿವರಾಗಿದ್ದರು. (ಪೊಟೋ ಕೃಪೆ: Ani)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….