ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಕೊವಿಡ್ ಲಾಕ್‌ಡೌನ್ ಹಿನ್ನಲೆಯಲ್ಲಿ ಪ್ರಕಟಿಸಿರುವ ಪ್ಯಾಕೇಜ್ ಕೇವಲ ನಾಮಕಾವಸ್ತೆಯಾಗಿದ್ದು, ಬಡವರಿಗೆ ಸರ್ಕಾರದ ಯೋಜನೆಗಳು ತಲುಪುತ್ತಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು.
ನಗರದ 28 ಪ್ರದೇಶಗಳಲ್ಲಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ನಡೆಸುತ್ತಿರುವ ನಿತ್ಯ ಅನ್ನದಾಸೋಹದ ಸ್ಥಳಗಳಿಗೆ ಬೇಟಿ ನೀಡಿ ಅವರು ಮಾತನಾಡಿದರು.
ಪರಿಹಾರ ಪಡೆಯಲು ಫಲಾನುವಭವಿಗಳ ಆ್ಯಪ್ ಚಾಲನೆ ಆಗುತ್ತಿಲ್ಲ. ರಾಜ್ಯದಲ್ಲಿರುವ ಒಂದೂವರೆ ಕೋಟಿ ಬಿಪಿಎಲ್ ಕಾರ್ಡ್ ದಾರರು ಇದ್ದಾರೆ. ಅವರ ಕುಟುಂಬಗಳಿಗೆ ತಲಾ ಹತ್ತು ಸಾವಿರ ಹಣವನ್ನು ವರ್ಗಾಯಿಸಿದರೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿರುವ ಹಿಂದೂ ದೇವಾಲಗಳಿಂದ ಬರುವ ಆದಾಯವನ್ನು ಕೇವಲ ಹಿಂದೂ ದೇಗುಲಗಳಲ್ಲಿ ಬಳಕೆ ಮಾಡಲಾಗುತ್ತದೆ. ಇತರೆ ಯಾರಿಗೂ ಬಳಕೆ ಮಾಡಲಾಗುವುದಿಲ್ಲ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಹಜ್ ಮತ್ತು ವಕ್ಪ್ ಸಚಿವ ಆನಂದ್ ಸಿಂಗ್ ಅವರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಶ್ರೀನಿವಾಸ ಪೂಜಾರಿ ಕೇವಲ ಮುಜರಾಯಿ ಇಲಾಖೆ ಸಚಿವ ಅವರು ಹೇಳಿದರೆ ನಡೆಯುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ ಏನು ಬೇಕಾದರೂ ಆಗುತ್ತದೆ ಎಂದರು.
ನನ್ನ ಮಗ ಮತ್ತು ನಿಖಿಲ್ ಇಬ್ಬರನ್ನೂ ಒಂಬತ್ತನೇ ತರಗತಿಯಿಂದಲೂ ನೋಡುತ್ತಿದ್ದೇನೆ. ನಿಖಿಲ್ ಕುಮಾರಸ್ವಾಮಿ ಸಹ ನನ್ನ ಮಗನಿದ್ದಂತೆ. ನಿಖಿಲ್ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.
ಈ ವೇಳೆ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮಿಪತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಸನಘಟ್ಟ ರವಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಶ್ರೀನಗರ ಬಷೀರ್, ಮುಖಂಡರಾದ ಸೋಮರುದ್ರಶರ್ಮ, ಆಂಜನಮೂರ್ತಿ, ಮುನಿರಾಜು ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….