ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕ ಸ್ಥಾನಕ್ಕೆ ವರ್ಗಾವಣೆಯಾಗಿ ಬಂದ ಡಾ.ಕೋನ ವಂಶೀಕೃಷ್ಣ ಅಧಿಕಾರ ಸ್ವೀಕರಿಸಿದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಾದ ಅಕ್ರಮ ಮದ್ಯ ಮಾರಾಟ, ಜೂಜಾಟಕ್ಕೆ ಕಡಿವಾಣ ಹಾಕಲಾಕುವುದು ಎಂಬ ಸಂದೇಶದ ಬೆನ್ನಲ್ಲೆ ತಾಲೂಕಿನ ದೊಡ್ಡಬೆಳವಂಗಲ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.
ಕಳೆದ ಒಂದು ವಾರದಲ್ಲಿ ಎರಡು ಜೂಜು ಅಡ್ಡೆಗಳ ಮೇಲೆ ದಾಳಿ ನಡೆಸಿ 15ಕ್ಕು ಹೆಚ್ಚು ಜೂಜುಕೋರರ ಬಂಧಿಸಿ, ಜೂಜಿಗಿಡಲಾಗಿದ್ದ ಲಕ್ಷಾಂತರ ರೂಗಳನ್ನು ವಶಪಡಿಸಿಕೊಂಡಿದ್ದಾರೆ.
ಜೂನ್ 29 ರಂದು ಐನಹಳ್ಳಿಯಲ್ಲಿ ಜೂಜಾಡುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿ 8 ಮಂದಿಯ ಬಂಧಿಸಿ 95.500 ರೂ ವಶ ಪಡಿಸಿಕೊಂಡಿದ್ದ ಬೆನ್ನಲ್ಲೆ, ಇಂದು ಕಲ್ಲೋಡು ಗ್ರಾಮದ ಖಾಲಿ ಜಮೀನಿನಲ್ಲಿ ಅಂದರ್ ಬಾಹರ್ ಜೂಜಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿರುವ ಸಬ್ ಇನ್ಸ್ಪೆಕ್ಟರ್ ಗಜೇಂದ್ರ ನೇತೃತ್ವದ ಪೊಲೀಸರು 9 ಮಂದಿಯನ್ನು ವಶಕ್ಕೆ ಪಡೆದು ರೂ 1,03,500 ನಗದು, 1 ಕಾರು, 6 ದ್ವಿಚಕ್ರವಾಹನ, 1 ಆಟೋ ಹಾಗೂ 10 ಮೊಬೈಲ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.
ಡಿವೈಎಸ್ಪಿ ಟಿ.ರಂಗಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಗಜೇಂದ್ರ ಹಾಗೂ ತಂಡದವರು ಜೂಜಾಡುತ್ತಿದ್ದವರ ಮೇಲೆ ದಾಳಿ ಮಾಡಿದ್ದಾರೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..