ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿಯ ದೊಡ್ಡರಾಯಪ್ಪನಹಳ್ಳಿ ಗ್ರಾಮದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಪರವಾನಗಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರ ಮೇಲೆ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ 2016ರ ದಿನಾಂಕ:10.06.2016 ಕ್ಲಾಜ್ 5 ರನ್ವಯ ಯಾವುದೇ ಮೊಕದ್ದಮೆಗಳು ದಾಖಲಾಗಿರಬಾರದು. ಈ ಬಗ್ಗೆ ದೃಢೀಕರಣ ಪತ್ರ ಲಗತ್ತಿಸಬೇಕು ಮತ್ತು ಯಾವುದೇ ಆಧಾರಿತ ಮೊಕದ್ದಮೆಗಳನ್ನು (ಕ್ರಿಮಿನಲ್) ಹೊಂದಿರಬಾರದು ಹಾಗೂ ಈಗಾಗಲೇ ನ್ಯಾಯಬೆಲೆ ಅಂಗಡಿ ಪರವಾನಿಗೆ ಹೊಂದಿದ್ದು, ಪರವಾನಿಗೆಯು ವಜಾ ಆಗಿದ್ದಲ್ಲಿ, ಅಂತಹ ಅರ್ಜಿದಾರರು ಅನರ್ಹರಾಗಿರುತ್ತಾರೆ. ಅರ್ಜಿದಾರರು ಆರ್ಥಿಕವಾಗಿ ದಿವಾಳಿಯಾಗಿರಬಾರದು ಮತ್ತು ಬ್ಯಾಂಕ್ನಲ್ಲಿ ಸಾಲ ಹೊಂದಿರಬಾರದು.
ವಿದ್ಯಾವಂತರಾಗಿದ್ದು, ಲೆಕ್ಕಪತ್ರ ವಹಿವಾಟನ್ನು ನಿರ್ವಹಿಸುವ ಮತ್ತು ಗಣಕಯಂತ್ರ ನಿರ್ವಹಿಸುವ ಜ್ಞಾನ ಹೊಂದಿರಬೇಕು. ಕನಿಷ್ಟ ವಿದ್ಯಾರ್ಹತೆ 10ನೇ ತರಗತಿ ತೇರ್ಗಡೆಯಾಗಿರುಬೇಕು ಹಾಗೂ ಅರ್ಜಿದಾರರು ಸ್ಥಳೀಯರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆರವರ ಕಾರ್ಯಾಲಯ, ಜಿಲ್ಲಾಡಳಿತ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29781025 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..