ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಶಾಲಾ ಆವರಣದಲ್ಲಿ ಕರ್ನಾಟಕ ರಾಜ್ಯ ಗೃಹರಕ್ಷಕ ದಳ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಗೃಹ ರಕ್ಷಕ ದಳ ರಾಜ್ಯದಲ್ಲಿ ಒಂದು ಲಕ್ಷ ಸಸಿ ನೆಡುವ ಗುರಿ ಹೊಂದಿದ್ದು, ಜಿಲ್ಲೆ, ತಾಲೂಕು ಹಾಗೂ ಹೋಬಳಿವಾರು ಸಸಿ ನಡೆವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.
ಈ ಹಿನ್ನೆಲೆ ದೊಡ್ಡಬೆಳವಂಗಲ ಘಟಕದ ಗೃಹರಕ್ಷಕ ದಳದ ಸಿಬ್ಬಂದಿಗಳು ಶಾಲೆ ಆವರಣದಲ್ಲಿ ತಲಾ ನಾಲ್ಕು ಗಿಡಗಳನ್ನು ನೆಟ್ಟರು.
ಈ ವೇಳೆ ಘಟಕಾಧಿಕಾರಿ ಟಿ.ರಾಜೇಶ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..