ದೊಡ್ಡಬಳ್ಳಾಪುರ: ತಾಲ್ಲೂಕಿನ ಕೆಸ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡಿಬ್ಯಾಡರಹಳ್ಳಿ ಗ್ರಾಮದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ.
ಈಗ ಸಕ್ರಿಯವಾಗಿ 8 ಜನರಿಗೆ ಕೋವೀಡ್-19 ದೃಢಪಟ್ಟಿದೆ. ಗ್ರಾಮಕ್ಕೆ ವೈದ್ಯರು ಭೇಟಿ ನೀಡಿ ತಪಾಸಣೆ ನಡೆಸುವಂತೆ ಕೇಳಿದರು ಸ್ಪಂಧಿಸುತ್ತಿಲ್ಲ ಎಂದು ಮಂಡಿಬ್ಯಾಡರಹಳ್ಳಿ ಗ್ರಾಮದ ನಿವಾಸಿ ನಟರಾಜ್ ದೂರಿದ್ದಾರೆ.
ಗ್ರಾಮದಲ್ಲಿ ಸುಮಾರು 700 ಜನ ಸಂಖ್ಯೆ ಇದೆ. ಇದರಲ್ಲಿ ಸುಮಾರು 110 ಜನರಿಗೆ ಮಾತ್ರ ಕೋವಿಡ್ ಲಸಿಕೆ ಹಾಕಲಾಗಿದೆ. ಉಳಿದವರಿಗೆ ಇನ್ನೂ ಮೊದಲ ಡೋಸ್ ಲಸಿಕೆಯನ್ನು ಸಹ ಹಾಕಿಲ್ಲ. ಬುಧವಾರ ಕೋವಿಡ್ ನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ. ತಾಲ್ಲೂಕು ಆಡಳಿತ ಈ ಬಗ್ಗೆ ತುರ್ತು ಗಮನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..