ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದ ಬಳಿ ಜಿಲ್ಲಾಡಳಿತ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗಾಗಿ ಮತ್ತು ಅವರ ಮಕ್ಕಳಿಗಾಗಿ ನೂತನವಾಗಿ ನಿರ್ಮಿಸಲಾಗಿರುವ ಶಿಶುಪಾಲನಾ ಮತ್ತು ಮಹಿಳೆಯರ ವಿಶ್ರಾಂತಿ ಗೃಹವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಉದ್ಘಾಟಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅನಿತಾಲಕ್ಷೀ, ಕಾರ್ಯಕ್ರಮ ನಿರೂಪಣಾಧಿಕಾರಿ ವೆಂಕಟರೆಡ್ಡಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..