ಬೆಂ.ಗ್ರಾ.ಜಿಲ್ಲೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಆಗಸ್ಟ್ 18 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಆಗಸ್ಟ್ 18 ರಂದು ಬೆಳಿಗ್ಗೆ 10.45 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ನಂತರ ಮಧ್ಯಾಹ್ನ 12.30 ಗಂಟೆಗೆ ದೇವನಹಳ್ಳಿ ಟೌನ್ ನಲ್ಲಿರುವ ಲಯನ್ಸ್ ಕ್ಲಬ್ ನ ಕೋವಿಡ್-19 ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ ಹಾಗೂ ಮಧ್ಯಾಹ್ನ 02.20 ಗಂಟೆಗೆ ಹೊಸಕೋಟೆ ತಾಲ್ಲೂಕಿನ ಕುರಬರಹಟ್ಟಿ ಜನತಾ ಕಾಲೋನಿಯಲ್ಲಿರುವ ಸೂಲಿಬೆಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ಹಾಗೂ “ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ” ಪರಿವೀಕ್ಷಣೆ ಮಾಡಲಿದ್ದಾರೆ.
ತದನಂತರ ಮಧ್ಯಾಹ್ನ 03.00 ಗಂಟೆಗೆ ಹೊಸಕೋಟೆ ತಾಲ್ಲೂಕಿನ ಸೂಲೆಬೆಲೆಯ ರಸ್ತೆಯ ಮಾರ್ಗವಾಗಿ ಬೆಂಗಳೂರು ನಗರಕ್ಕೆ ನಿರ್ಗಮಿಸಲಿದ್ದಾರೆ ಎಂದು ಸಚಿವರ ವಿಶೇಷಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..