ದೊಡ್ಡಬಳ್ಳಾಪುರ: ಮಹಾಮಾರಿ ಕರೊನಾ ವಿರುದ್ದ ಹೋರಾಟಲು ನಮ್ಮ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಶೇ.100ರಷ್ಟು ಲಸಿಕೆ ಕೊಡಿಸಲು ಒತ್ತು ನೀಡಲಾಗುವುದೆಂದು ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಹೆಚ್.ಜೆ.ಸಂದೇಶ್ ತಿಳಿಸಿದರು.
ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಆವರದಲ್ಲಿ ಆಯೋಜಿಸಿದ್ದ ಕೋವಿಡ್-19 ಲಸಿಕಾಕರಣ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೋವಿಡ್ ತಡೆಗಟ್ಟಲು ಸಂಕಲ್ಪ ಮಾಡಲಾಗಿದ್ದು, ಕೋವಿಡ್-19 ಲಸಿಕಾಕರಣ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಗ್ರಾಮಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಲಸಿಕೆ ಪಡೆಯುವ ಮೂಲಕ ಕೋವಿಡ್-19 ಮೂರನೇ ಅಲೆ ಎದುರಾಗದಂತೆ ತಡೆಯಲು ಸಹಕಾರ ನೀಡಬೇಕೆಂದು ಸಂದೇಶ್ ಮನವಿ ಮಾಡಿದರು.
ಈ ವೇಳೆ ಹಿರಿಯ ಮುಖಂಡ ಬಿ.ಹೆಚ್.ಕೆಂಪಣ್ಣ, ಗ್ರಾಪಂ ಪಿಡಿಒ ಎಸ್.ವಿ.ರವೀಂದ್ರ, ವೈದ್ಯಾಧಿಕಾರಿ ಡಾ.ನಕುಲ್ ಸೇರಿದಂತೆ ಗ್ರಾಪಂ ಸದಸ್ಯರುಗಳು, ಆರೋಗ್ಯ ಇಲಾಖೆ ಹಾಗೂ ಗ್ರಾಪಂ ಸಿಬ್ಬಂದಿಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..