ಬೆಂಗಳೂರು: ಕೋರಮಂಗಲದ, ಮಂಗಳ ಕಲ್ಯಾಣಮಂಟಪದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದ್ದು, 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾತ್ರಿ 1:30ರ ವೇಳೆ ಕಾರೊಂದು ಫುಟ್ ಪಾತ್ ಮೇಲಿದ್ದ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಕಟ್ಟಡಕ್ಕೆ ಅಪ್ಪಳಿಸಿದ್ದು ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಾವನ್ನಪ್ಪಿರುವವರನ್ನು ಕರುಣಾಸಾಗರ, ಬಿಂದು, ಇಶಿತಾ, ಡಾ.ಧನುಶಾ, ಅಕ್ಷಯ್ ಗೋಯಲ್, ಉತ್ಸವ್, ರೋಹಿತ್ ಎಂದು ಗುರುತಿಸಲಾಗಿದೆ. ಇನ್ನು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮೃತರಿಗೆ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎನ್ನಲಾಗಿದೆ.
ತಮಿಳುನಾಡಿನ ಹೊಸೂರು ಕ್ಷೇತ್ರದ ಡಿಎಂಕೆ ಶಾಸಕ ಜೈಪ್ರಕಾಶ್ ಪುತ್ರ ಕರನಾಕರ್ ಸಾವನ್ನಪ್ಪಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..