ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರ ತಾಲ್ಲೂಕು ಕಾನೂನು ಸೇವಾ ಸಮಿತಿ, ಕಾರ್ಮಿಕ ಇಲಾಖೆ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕ ಸಮಸ್ಯೆ ಪರಿಹರಿಸಲು ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಆಗಸ್ಟ್ 16 ರಿಂದ ಸೆಪ್ಟೆಂಬರ್ 16 ವರೆಗೆ ಬೆಳಿಗ್ಗೆ 10.30 ರಿಂದ ಅಪರಾಹ್ನ 4 ಗಂಟೆವರೆಗೆ ಹಮ್ಮಿಕೊಳ್ಳಲಾಗಿರುವ ಕಾರ್ಮಿಕ ಅದಾಲತ್ ಕಾರ್ಯಕ್ರಮವನ್ನು ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಮಿಕ ಇಲಾಖೆ ಇವರ ಸಹಯೋಗದೊಂದಿಗೆ ತಾಲ್ಲೂಕಿನಲ್ಲಿ ಆಟೋ ಪ್ರಚಾರಕ್ಕೆ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ನ್ಯಾ.ದೀಪಾ.ಕೆ.ಆರ್ ಮತ್ತು ಅಪರ ಸಿವಿಲ್ ನ್ಯಾಯಾಧೀಶರಾದ ಮಮತಾ ಶಿವಪೂಜಿ ಅವರು ತಾಲ್ಲೂಕು ನ್ಯಾಯಾಲಯದ ಆವರಣದಲ್ಲಿಂದು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಸೆಪ್ಟೆಂಬರ್ 1 ರಿಂದ 5 ರವರೆಗೆ ಆಟೋ ಪ್ರಚಾರ ನಡೆಯಲಿದ್ದು, ಕಾರ್ಮಿಕರು ಸೂಕ್ತ ದಾಖಲೆಗಳೊಂದಿಗೆ ಮತ್ತು ಸ್ವೀಕೃತಿ ಪತ್ರ ಹಾಗೂ ಬ್ಯಾಂಕ್ ವಿವರಗಳನ್ನು ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಸಲ್ಲಿಸಬಹುದು ಹಾಗೂ ಇದರ ಸದುಪಯೋಗ ಪಡೆದುಕೊಳ್ಳಬಹುದು.
ಈ ಸಂದರ್ಭದಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎನ್.ಭೈರೇಗೌಡ, ಕಾರ್ಯದರ್ಶಿ ಎ. ಕೃಷ್ಣಮೂರ್ತಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್. ಆರ್. ನಾಗೇಂದ್ರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬಾರಾವ್, ತಾಲ್ಲೂಕು ಕಾರ್ಮಿಕ ನಿರೀಕ್ಷಕ ಎಂ. ಪ್ರದೀಪ್ , ಜಿಲ್ಲಾ ಬಾಲ ಕಾರ್ಮಿಕ ಸೊಸೈಟಿಯ ಕಾರ್ಯಕ್ರಮ ಅಧಿಕಾರಿ ಕರಿಯಪ್ಪ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..