ಬೆಂ.ಗ್ರಾ.ಜಿಲ್ಲೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವಂತಹ ಮಹತ್ವಾಕಾಂಕ್ಷೆಯ ವಿವಿಧ ಆನ್ಲೈನ್ (ಡಿಜಿಟಲ್) ಸೇವೆಗಳ ಮೂಲಕ ಸೌಲಭ್ಯಗಳನ್ನು ತ್ವರಿತವಾಗಿ ಸಾರ್ವಜನಿಕರಿಗೆ ತಲುಪಿಸಬೇಕು ಎಂದು ಅಪರ ಮುಖ್ಯ ಕಾರ್ಯದರ್ಶಿ ಡಾ. ಅಮಿತಾ ಪ್ರಸಾದ್ ಅವರು ತಿಳಿಸಿದರು.
ಹೊಸಕೋಟೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಆನ್ಲೈನ್ ಸೇವೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು ನಿಗದಿತ ಕಾಲಮಿತಿಯೊಳಗೆ ಅಧಿಕಾರಿಗಳು ಸೇವೆಗಳನ್ನು ಒದಗಿಸುವ ಮೂಲಕ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡುವಂತಾಗಬೇಕು ಎಂದರು.
ಸಕಾಲ ಯೋಜನೆಯಡಿ ಒದಗಿಸಬಹುದಾದಂತಹ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಪಿಂಚಣಿ, ಆರ್.ಸಿ.ಸಿ.ಎಂ.ಎಸ್ ಸೇವೆ, ಸಾಲ ಮನ್ನಾ, ಬೆಳೆ ಸಮೀಕ್ಷೆ, ಬೆಳೆ ಪರಿಹಾರ ಸೇರಿದಂತೆ ಇನ್ನಿತರೆ ಆನ್ಲೈನ್ ಸೇವೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ, ಅದರ ಸದುಪಯೋಗ ಪಡಿಸಿಕೊಳ್ಳಲು ಉತ್ತೇಜಿಸುವಂತೆ ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಗೀತಾ, ಆರ್.ಹೆಚ್.ಎಂ ಗಂಗಾಧರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಎನ್.ಎಸ್.ಮಹೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..