ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಎಂದು ಆಗ್ರಹಿಸಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿದರು ಪ್ರತಿಭಟನೆ ನಡೆಸಿದರು.
ಈ ವೇಳೆ ಸ್ಥಳ ಹಿರಿಯ ಅಧಿಕಾರಿಗಳು ಬರಬೇಕೆಂದು ಆಗ್ರಹಿಸಿ ಹಾಡೋನಹಳ್ಳಿ – ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ರಸ್ತೆ ತಡೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನೆ ನಿರತ ಮಹಿಳೆಯರು, ಹಲವು ತಿಂಗಳಿನಿಂದ ನೀರಿಗಾಗಿ ಮನವಿ ಸಲ್ಲಿಸಿದರು ಗ್ರಾಮಪಂಚಾಯಿತಿ ಅಧಿಕಾರಿಗಳು ಸ್ಪಂದಿದುತ್ತಿಲ್ಲ, ನಾವು ಮನುಷ್ಯರೆ ನಮಗೂ ನೀರು ಕೊಡಿ ಎಂದು ಗ್ರಾಪಂ ವಿರುದ್ದ ದಿಕ್ಕಾರ ಕೂಗಿದರು.
ಇಒ ಮುರುಡಯ್ಯ ಭೇಟಿ: ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಬಂದ ತಾಲೂಕುಪಂಚಾಯಿತಿ ಇಒ ಮುರುಡಯ್ಯ, ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಸಂಜೆಯ ಒಳಗಾಗಿ ಕ್ರಮಕೈಗೊಳ್ಳಲಾಗುವುದು, ನೀರು ಲಭ್ಯವಾಗದಿದ್ದಲ್ಲಿ ನೂತನ ಕೊಳವೆ ಬಾವಿ ಕೊರೆಸಲಾಗುವುದೆಂದು ಹೇಳುವ ಮೂಲಕ ಪ್ರತಿಭಟನೆಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..