ಮಂಗಳೂರು: ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.
ಜುಲೈ 18ರಂದು ಆಸ್ಕರ್ ಫರ್ನಾಂಡೀಸ್ ಅವರು ಮನೆಯಲ್ಲಿ ಯೋಗ ಮಾಡುತ್ತಿದ್ದ ಸಮಯದಲ್ಲಿ ಜಾರಿ ಬಿದ್ದಿದ್ದರು. ನಂತರ ಮಾಮೂಲಿ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರೆಳಿದಾಗ ತಲೆಯ ಒಳಭಾಗಕ್ಕೆ ಪೆಟ್ಟಾಗಿದ್ದು ತಿಳಿದುಬಂದಿತ್ತು. ನಂತರ ಅವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆಸ್ಕರ್ ಫರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ಪಡೆದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಕುಟುಂಬಿಕರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಎಂ.ಬಿ.ಪಾಟೀಲ್ ಮುಂತಾದವರು ಮಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..