ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ತಾಲೂಕು ಕಚೇರಿಯಲ್ಲಿ ಕೊವಿಡ್-19 ಹಿನ್ನಲೆಯಲ್ಲಿ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಹಶಿಲ್ದಾರ್ ಟಿ.ಎಸ್.ಶಿವರಾಜ್ ಮಾತನಾಡಿ, ನಮ್ಮ ಶಿಲ್ಪಕಲೆ, ಲೋಹದ ಕಲೆ ಮೊದಲಾಗಿ ವಿಶಿಷ್ಟ ಕಲೆಗಳ ದೇಶದ ಶ್ರೀಮಂತ ಪರಂಪರೆಗೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ. ಕಲಾತ್ಮಕವಾಗಿ, ಸಾಂಸ್ಕೃತಿಕವಾಗಿ ತಮ್ಮ ಕಲೆಗೆ ಮೆರುಗು ನೀಡುತ್ತಿರುವ ವಿಶ್ವಕರ್ಮರು ಶ್ರಮಜೀವಿಗಳೂ ಆಗಿದ್ದಾರೆ. ಜಗತ್ತಿನ ಎಲ್ಲಾ ವಸ್ತುಗಳಿಗೂ ಸೃಷ್ಟಿ ಎನ್ನುವುದು ಇರಬೇಕು. ಅಂತೆಯೇ ಬ್ರಹ್ಮಾಂಡದ ಸೃಷ್ಟಿಕರ್ತ ವಿಶ್ವಕರ್ಮರಾಗಿದ್ದು, ಅವರ ಕಾಯಕ ನಿಷ್ಟೆ ನಮಗೆಲ್ಲಾ ಮಾದರಿಯಾಗಬೇಕಿದೆ ಎಂದರು.
ವಿಶ್ವಕರ್ಮ ಜನಾಂಗದವರಿಗೆ ನಿವೇಶನ ಮಂಜೂರು ಮಾಡುವ ವಿಚಾರ ಗಮನದಲ್ಲಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕಸಬಾ ಗ್ರಾಮ ಲೆಕ್ಕಿಗ ರಾಜೇಂದ್ರ ಬಾಬು, ಕಸಾಪ ತಾಲೂಕು ಅಧ್ಯಕ್ಷೆ ಪ್ರಮೀಳಾ ಮಹಾದೇವ್ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಭಾಗವಹಿಸಿದ್ದರು.
ಕಾಳಮ್ಮ ದೇವಾಲಯದಲ್ಲಿ ಪೂಜೆ: ತಾಲೂಕು ವಿಶ್ವಕರ್ಮ ಮಹಾಮಂಡಲ ಹಾಗೂ ವಿಶ್ವಕರ್ಮ ಮಹಾಸಭಾ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮ ಪೂಜಾ ಕಾರ್ಯಕ್ರಮ ಕಾಳಿಕಾ ಕಮಟೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..