ಬೆಂಗಳೂರು: 2021-21 ನೇ ಸಾಲಿನ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ ಎಂದು ದೊಡ್ಡಬಳ್ಳಾಪುರದ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಚಕ್ರವರ್ತಿ ತಿಳಿಸಿದ್ದಾರೆ.
ಈ ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ಅನ್ನು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಚೆಕ್ ಮಾಡಬಹುದು.
ನವೋದಯ ವಿದ್ಯಾಲಯ ಸಮಿತಿಯು 2021-22ನೇ ಸಾಲಿಗೆ 6ನೇ ತರಗತಿ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆ ಬರೆದ ಅಭ್ಯರ್ಥಿಗಳು http://cbseit.in/cbse/web/nvsresult/Result.aspx ಲಿಂಕ್ ಬಳಸಿ ತಮ್ಮ ಫಲಿತಾಂಶವನ್ನು ಚೆಕ್ ಮಾಡಬಹುದಾಗಿದೆ ಎಂದವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……