ದೊಡ್ಡಬಳ್ಳಾಪುರ: ತಾಲೂಕಿನ ಹೆಸರಾಂತ ರಂಗ ಕಲಾವಿದ ಹಾಗೂ ಹಾರ್ಮೋನಿಯಂ ಕಲಾವಿದರಾದ ಗುರು ಮಲ್ಲಯ್ಯ(87) ಭಾನುವಾರ ಸಂಜೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ, ನಾಲ್ವರು ಗಂಡು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ನಗರದ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಾಲೂಕು ಕಲಾವಿದರ ಸಂಘದ ಗೌರವ ಅಧ್ಯಕ್ಷರಾಗಿದ್ದ ಗುರು ಮಲ್ಲಯ್ಯ ಅವರು ಹಾರ್ಮೋನಿಯಂ ಮಾಸ್ಟರ್ ಆಗಿ ಅಸಂಖ್ಯಾತ ಶಿಷ್ಯ ವೃಂದ ಹೊಂದಿದ್ದರು. ಹಲವಾರು ನಾಟಕಗಳನ್ನು ನಿರ್ದೇಶಿಸಿ, ರಂಗ ಭೂಮಿ ಕಲಾವಿದರಾಗಿ ಗುರುತಿಸಿಕೊಂಡಿದ್ದರು.
ಗುರು ಮಲ್ಲಯ್ಯ ಅವರ ನಿಧನಕ್ಕೆ ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದಿಂದ ಸಂತಾಪ ಸೂಚಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….