ಬೆಂ.ಗ್ರಾ.ಜಿಲ್ಲೆ: 2021ನೇ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟ ಸೇವೆ ಸಲ್ಲಿಸುತ್ತಿರುವ / ಸಲ್ಲಿಸಿರುವ ವಿಶೇಷ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿಶ್ವ ಸಂಸ್ಥೆಯ ನಿರ್ದೇಶನಾನುಸಾರ ಪ್ರತಿ ವರ್ಷ ಪ್ರತಿ ವರ್ಷ ಡಿಸೆಂಬರ್ 3 ರಂದು “ವಿಶ್ವ ವಿಕಲಚೇತನರ ದಿನಾಚರಣೆಯನ್ನು” ಆಚರಿಸಲಾಗುತ್ತದೆ. ಆ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ರಾಜ್ಯ ಪ್ರಶಸ್ತಿಗಾಗಿ ನೀಡಿ, ಗೌರವಿಸಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅಥವಾ ಇಲಾಖೆಯ ವೆಬ್-ಸೈಟ್ www.dwdsc.kar.nic.in ನಲ್ಲಿ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ 2021ರ ಅಕ್ಟೋಬರ್ 23 ರೊಳಗೆ ಪ್ರಸ್ತಾವನೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಚೇರಿ, ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….