ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿಯ, ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಸರ್ಕಾರದ ಸುತ್ತೋಲೆಯಂತೆ ಬಲಿಪಾಡ್ಯಮಿ ಅಂಗವಾಗಿ ಇಂದು ಗೋಪೂಜೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಗೋಪೂಜೆ ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ.), ನಗರಸಭೆಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಸುಧಾರಾಣಿ, ಉಪಾಧ್ಯಕ್ಷೆ ಫರ್ಹಾನಾ ತಾಜ್, ದೇವಾಲಯದ ಆಡಳಿತಾಧಿಕಾರಿ ಹೇಮಾವತಿ, ಕಾರ್ಯ ನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜ್ ಸೇರಿದಂತೆ ಬಿಜೆಪಿ ಮುಖಂಡರು, ಭಕ್ತಾದಿಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……