ದೊಡ್ಡಬಳ್ಳಾಪುರ: ಕೋವಿಡ್ ನಂತರ ಆರಂಭವಾದ ಶಾಲೆ, ಕಾಲೇಜುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆ ಸೌಕರ್ಯವಿಲ್ಲದೆ ವಿದ್ಯಾರ್ಥಿಗಳು ಪದೇ ಪದೇ ಪ್ರತಿಭಟನೆ ನಡೆಸಬೇಕಾದ ಅನಿವಾರ್ಯತೆ ತಾಲೂಕಿನಲ್ಲಿ ಸೃಷ್ಟಿಯಾಗಿದೆ.
ಇತ್ತೀಚೆಗಷ್ಟೇ ಜಿ.ಹೊಸಹಳ್ಳಿ ಮಾರ್ಗದ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿರುವ ಬೆನ್ನಲ್ಲೆ. ಶಾಲೆ ಕಾಲೇಜು ಅವಧಿಗೆ ಹೆಚ್ಚುವರಿ ಬಸ್ ಸಂರ್ಪಕವಿಲ್ಲದೆ, ಬಸ್ ಬಾಗಿಲಲ್ಲಿ ನೇತಾಡಿಕೊಂಡು ಪ್ರಯಾಣಿಸ ಬೇಕಾದ ಅನಿವಾರ್ಯತೆ ವೇಳೆ ವಿದ್ಯಾರ್ಥಿನಿಯೊಬ್ಬರು ಆಯತಪ್ಪಿ ಬಿದ್ದಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲದಲ್ಲಿ ಇಂದು ಸಂಭವಿಸಿದೆ.
ಗಾಯಗೊಂಡ ಯುವತಿಯನ್ನು ಶ್ರೀವಾಣಿ ಕಾಲೇಜಿನ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಮಾದ ಸಂಭವಿಸಿಲ್ಲ.
ಈ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್ ಸೌಲಭ್ಯ ಇಲ್ಲದೆ ಇರುವುದೇ ಈ ಘಟನೆಗೆ ಕಾರಣವೆಂದು ಆರೋಪಿಸಿದ ವಿದ್ಯಾರ್ಥಿಗಳು, ಬಸ್ ನಿಲ್ದಾದಲ್ಲೆ ಸಾರಿಗೆ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಪದೇ ಪದೇ ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಿದರು ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಬಸ್ ನಿಲುಗಡೆ ಮಾಡದೆ ಚಾಲಕರು ಬೇಜವಬ್ದಾರಿಯಿಂದ ವರ್ತಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ತೆರಳಲು ವಿಳಂಭವಾಗುತ್ತಿದೆ. ಬಸ್ ನಿಲ್ದಾಣದಲ್ಲಿ ಬಸ್ ಗಳನ್ನು ಸಮರ್ಪಕವಾಗಿ ನಿಲ್ಲಿಸಿದೆ ನಿಧಾನಗತಿಯಲ್ಲಿ ಓಡಿಸುತ್ತಿದ್ದು, ಆಯತಪ್ಪಿ ಬೀಳುವಂತಾಗಿದೆ ಎಂದು ಆರೋಪಿಸಿದರು.
ವಿಷಯ ತಿಳಿದ ಡಿಪೋ ವ್ಯವಸ್ಥಾಪಕರು ಮತ್ತೊಂದು ಬಸ್ ಕಳುಹಿಸಿದರು. ನಿರಂತರವಾಗಿ ಹೆಚ್ಚುವರಿ ಬಸ್ ಬರದಿದ್ದರೆ ಮತ್ತೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟು ಕಾಲೇಜಿಗೆ ತೆರಳಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……