ಬೆಂ.ಗ್ರಾ.ಜಿಲ್ಲೆ: ಸತತವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ನ.19 ಮತ್ತು 20 ರಂದು ರಜೆ ಘೋಷಿಸುವಂತೆ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಹೆಚ್.ಗಂಗಮಾರೇಗೌಡ ಸೂಚಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ತೆರಳಲು ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಎರಡು ದಿನ ರಜೆ ಘೋಷಿಸಿ ಮೌಕಿಕವಾಗಿ ಈ ಆದೇಶವನ್ನು ಮಾಡಿದ್ದಾರೆ. ಈ ರಜೆಯನ್ನು ಉಳಿದ ರಜೆ ದಿನಗಳಲ್ಲಿ ಸರಿ ದೂಗಿಸಿಕೊಳ್ಳುವಂತೆ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……