![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ದೊಡ್ಡಬಳ್ಳಾಪುರ: ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಬಟ್ಟೆ ಕದ್ದು, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಕೈಗಾರಿಕಾ ಪ್ರದೇಶದಲ್ಲಿನ ಸ್ಕಾರ್ಟ್ಸ್ ಮತ್ತು ಬಾಂಬೆ ರೆಯಾನ್ ಕಾರ್ಖಾನೆಯಲ್ಲಿ ಸುಮಾರು 1 ಲಕ್ಷ 50 ಸಾವಿರ ಮೌಲ್ಯದ ರೆಡಿ ಮೇಡ್ ಬಟ್ಟೆಗಳನ್ನು ಕದ್ದಿರುವ ಕುರಿತು ದೂರು ದಾಖಲಾಗಿತ್ತು ಎನ್ನಲಾಗಿದೆ.
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸತೀಶ್ ನೇತೃತ್ವದ ತಂಡ ಹಲವು ಕೋನಗಳಲ್ಲಿ ತನಿಖೆ ನಡೆಸಿದ್ದು, ಆರೋಪಿಗಳು ವಾಟ್ಸಪ್ ಮೂಲಕ ಬಟ್ಟೆ ಮಾರಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಈ ಕುರಿತಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……