ದೊಡ್ಡಬಳ್ಳಾಪುರ: ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ಸಿ.ನಾರಾಯಣಸ್ವಾಮಿ ಅವರ ಪರವಾಗಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಶ್ವಥ್ ನಾರಾಯಣಕುಮಾರ್ ಹಾಗೂ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಾನಂದರೆಡ್ಡಿ ತಾಲೂಕಿನ ಆರೂಢಿ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಸಭೆ ಸೇರಿ ಮತ ಯಾಚಿಸಿದರುು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಶ್ವಥ್ ನಾರಾಯಣಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ಅಭಿವೃದ್ಧಿ, ಗ್ರಾಮಪಂಚಾಯಿತಿಗಳಿಗೆ ಹೆಚ್ಚಿನ ಅನುದಾನ ದೊರಕಿಸಲು ಬಿಜೆಪಿ ಅಭ್ಯರ್ಥಿ ಬಿ.ಸಿ.ನಾರಾಯಣಸ್ವಾಮಿ ಅವರಿಗೆ ಮತ ನೀಡಬೇಕಿದೆ. ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿರುವ ಅಭ್ಯರ್ಥಿ ಚುನಾವಣೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ ಹೊರತು ಪಡಿಸಿ ಅವರಿಂದ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಪ್ರಯತ್ನ ಇಲ್ಲವಾಗಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿಗೆ ಮತ ನೀಡಬೇಕೆಂದು ಮನವಿ ಮಾಡಿದರು.
ಈ ವೇಳೆ ಬಿಜೆಪಿ ಅಭ್ಯರ್ಥಿ ಬಿ.ಸಿ.ನಾರಾಯಣಸ್ವಾಮಿ, ಆರೂಢಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಜಯಮ್ಮಪ್ರಭು ಸೇರಿದಂತೆ ಸದಸ್ಯರು, ಮುಖಂಡರು ಹಾಜರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….