ದೊಡ್ಡಬಳ್ಳಾಪುರ: ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಗೆ ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯ ಗ್ರಾಮಪಂಚಾಯತ್ ಹಾಗೂ ನಗರಸಭೆ ಸದಸ್ಯರನ್ನೊಳಗೊಂಡ ಚುನಾವಣಾ ಪ್ರಚಾರ ಸಭೆ ಡಿ.2ರಂದು ಬೆಳಿಗ್ಗೆ 11 ಗಂಟೆಗೆ ನಗರದ ಒಕ್ಕಲಿಗರ ಭವನದಲ್ಲಿ ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ವಿಧಾನಪರಿಷತ್ ಜೆಡಿಎಸ್ ಅಭ್ಯರ್ಥಿ ರಮೇಶ್ ಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಲಕ್ಷ್ಮೀಪತಿ, ಜಿಪಂ ಮಾಜಿ ಸದಸ್ಯ ಅಪ್ಪಯ್ಯಣ್ಣ, ಮುಖಂಡ ಹರೀಶ್ ಗೌಡ ಮೊದಲಾದ ಜೆಡಿಎಸ್ ಮುಖಂಡರು ಸಭೆಯಲ್ಲಿ ಭಾಗವಹಿಸುತ್ತಿದ್ದು, ಚುನಾಯಿತ ಸದಸ್ಯರು ಸಭೆಯಲ್ಲಿ ಭಾಗವಹಿಸಲು ಕೋರಲಾಗಿದೆ ಎಂದು ವಕ್ತಾರ ಕುಂಟನಹಳ್ಳಿ ಮಂಜುನಾಥ್ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….