ದೊಡ್ಡಬಳ್ಳಾಪುರ: ವಿಧಾನ ಪರಿಷತ್ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ 24×7 ಕಂಟ್ರೋಲ್ ರೂಂ ಸ್ಥಾಪನೆ ಮಾಡಲಾಗಿದೆ ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ -2021 ರ ಕುರಿತು ನ.11ರಿಂದ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತಾಲೂಕು ಕಚೇರಿಯಲ್ಲಿ 24×7 ಕಂಟ್ರೋಲ್ ರೂಂ (080-27622002) ಸ್ಥಾಪಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….