ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್ಜಿಪಿ ಕಸ ವಿಲೇವಾರಿ ಘಟಕದ ವಿರುದ್ಧ ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದ ಸ್ಥಳೀಯ ಗ್ರಾಮಸ್ಥರ ಮೇಲೆ ಬಲಪ್ರಯೋಗ ನಡೆಸುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಿರುವ ಬಿಬಿಎಂಪಿ ಹಾಗೂ ಪೊಲೀಸರ ಕ್ರಮ ಖಂಡನೀಯ ಎಂದು ಕೊರಟಗೆರೆ ತಾಲ್ಲೂಕಿನ ಎಲೆರಾಂಪುರದ ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ.ಹನುಮಂತನಾಥಸ್ವಾಮೀಜಿ ಹೇಳಿದ್ದಾರೆ.
ಎರಡು ವರ್ಷಗಳ ಹಿಂದೆ ಇದೇ ಕಸ ವಿಲೇವಾರಿ ಘಟಕ ಮುಚ್ಚುವಂತೆ ಧರಣಿ ನಡೆಸಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ನೀಡಿದ್ದ ಭರವಸೆ ಸುಳ್ಳಾಗಿದ್ದರಿಂದಲೇ ಮತ್ತೆ ಸ್ಥಳೀಯ ಗ್ರಾಮಸ್ಥರು ಧರಣಿ ನಡೆಸುವ ಅನಿವಾರ್ಯತೆ ಉಂಟಾಗಿದೆ. ಎಂಎಸ್ ಪಿ ಕಸ ವಿಲೇವಾರಿ ಘಟಕದ ಸುತ್ತಲಿನ ಗ್ರಾಮಗಳನ್ನು ಮೀರಿ ಈಗ ಅಲ್ಲಿನ ಕಲುಷಿತ ನೀರು ಕೊರಟಗೆರೆ ತಾಲ್ಲೂಕಿನ ಕೆರೆಗಳನ್ನು ಸೇರಿ ಇಲ್ಲಿನ ನೀರನ್ನು ಹಾಳುಮಾಡುತ್ತಿದೆ. ಕೆಲವೇ ಜನರನ್ನು ಬಂಧಿಸಿದ ಮಾತ್ರಕ್ಕೆ ಹೋರಾಟವನ್ನು ಹತ್ತಿಕ್ಕಿ ಕಸ ತಂದು ಸುರಿಯಬಹುದು ಎನ್ನುವ ಭ್ರಮೆಯಲ್ಲಿರುವ ಬಿಬಿಎಂಪಿ ಅಧಿಕಾರಿಗಳ ಕನಸು ಈಡೇರಲು ಬಿಡುವ ಪ್ರಶ್ನೆಯೇ ಇಲ್ಲ.
ಎರಡು ವರ್ಷಗಳ ಹಿಂದೆ ನಡೆಸಿದಂತೆಯೇ ಪಕ್ಷಾತೀತವಾಗಿ ಮತ್ತೆ ಧರಣಿಯನ್ನು ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. (ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….