ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಕ್ಷೇತ್ರದಲ್ಲಿ ಸ್ಕಂದ(ಚಂಪಾ) ಷಷ್ಠಿಯ ಅಂಗವಾಗಿ ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳು ನಡೆದವು.
ದೇವಾಲಯದಲ್ಲಿ ಶಿವಗಂಗಾ ಹಾರ್ಡ್‍ವೇರ್ ಅವರ ಸಹಯೋಗದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ನಾಗಾರಾಧನೆಗೆ ಪ್ರಸಿದ್ದವಾಗಿರುವ ಘಾಟಿ ಕ್ಷೇತ್ರದಲ್ಲಿ ಸ್ಕಂದ(ಚಂಪಾ) ಷಷ್ಠಿಯ ಅಂಗವಾಗಿ ಬೆಳಿಗ್ಗೆ ಅಭಿಷೇಕ ಹಾಗೂ ಮಹಾಮಂಗಳಾರತಿ ನಡೆಯಿತು. ಸುಬ್ರಹ್ಮಣ್ಯಸ್ವಾಮಿಯ ಪ್ರಾಕಾರೋತ್ಸವ ನಡೆಯಿತು.
ಭಕ್ತಾದಿಗಳು ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿದರು. ಸಹಸ್ರಾರು ಭಕ್ತಾದಿಗಳು ಸಾಲುಗಟ್ಟಿ ನಿಂತು ಸುಬ್ರಹ್ಮಣ್ಯಸ್ವಾಮಿ ದರ್ಶನ ಪಡೆದರು.
ಗುರುವಾರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಪೊಲೀಸ್ ವರಿಷ್ಟಾಧಿಕಾರಿ ಡಾ.ಕೆ.ವಂಶಿ ಕೃಷ್ಣ, ಅಪರ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಗಣೇಶ್, ಡಿವೈಎಸ್‍ಪಿ ನಾಗರಾಜ್, ಸಿಪಿಐ ನವೀನ್ ಕುಮಾರ್, ಇನ್ಸ್‌ಪೆಕ್ಟರ್ ಸತೀಶ್ ಮೊದಲಾದ ಗಣ್ಯರು ಸುಬ್ರಹ್ಮಣ್ಯಸ್ವಾಮಿಯ ದರ್ಶನ ಪಡೆದರು.
ಈ ಬಾರಿ ಜನವರಿ 8 ರಂದು ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯಲಿದ್ದು, ಕೋವಿಡ್ ಹಿನ್ನಲೆಯಲ್ಲಿ ಜಾತ್ರೆ ಹಾಗೂ ಭಾರಿ ದನಗಳ ಜಾತ್ರೆ ನಡೆಸುವ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….