ದೊಡ್ಡಬಳ್ಳಾಪುರ: ತಮ್ಮ ಭವಿಷ್ಯವನ್ನು ರೂಪಿಸಿಕೊಂಡು ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡುವ ಮೂಲಕ ಸಮ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದು ಹಿಂದಿ ಶಿಕ್ಷಕಿ ಕೆ.ಎಲ್.ರಾಜೇಶ್ವರಿ ಹೇಳಿದರು.
ತಾಲ್ಲೂಕಿನ ಕೊನಘಟ್ಟ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಬಿಳ್ಕೋಡುಗೆ ಸಮಾರಂಭದಲ್ಲಿ ಮಾತನಾಡಿ, ಮಾತೃ ಭಾಷೆಯನ್ನು ಚನ್ನಾಗಿ ಕಲಿಯುವುದರೊಂದಿಗೆ ಇತರೆ ಭಾಷೆಗಳನ್ನು ಕಲಿಯ ಬೇಕಿದೆ. ಇಂದು ಇಡೀ ವಿಶ್ವವೇ ಒಂದು ಹಳ್ಳಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಭಾಷೆಗಳನ್ನು ಕಲಿತಷ್ಟು ಹೆಚ್ಚಿನ ಉದ್ಯೋಗ ಅವಕಾಶಗಳು ದೊರೆಯಲು ಸಹಕಾರಿಯಾಗಲಿದೆ. ನಮ್ಮ ಜ್ಞಾನದ ಅರಿವಿನ ವಿಸ್ತರಾವು ಹೆಚ್ಚಾಗಲಿದೆ ಎಂದರು.
ಪ್ರೌಢ ಶಾಲೆಯ ಮುಖ್ಯಶಿಕ್ಷಕ ಶಶಿಶೇಖರ್ ಮಾತನಾಡಿದರು.ಕಾರ್ಯಕ್ರಮದಲ್ಲಿ. ಎಸ್ಡಿಎಂಸಿ ಅಧ್ಯಕ್ಷ ಕೃಷ್ಣಪ್ಪ,ಉಪಾಧ್ಯಕ್ಷ ಕೆಂಪೇಗೌಡ,ಕೊನಘಟ್ಟ ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುನಾಥ್,ಆರಾಧ್ಯ,ಜ್ಯೋತಿ ರಮೇಶ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….