ಬೆಂಗಳೂರು: ದೇಶದ ಅತಿದೊಡ್ಡ ವಕೀಲರ ಸಂಘವಾದ ಬೆಂಗಳೂರು ವಕೀಲರ ಸಂಘಕ್ಕೆ ಅಧ್ಯಕ್ಷರಾಗಿ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಆಯ್ಕೆಯಾಗಿದ್ದಾರೆ.
ಸಂಘಕ್ಕೆ ಇಂದು ನಡೆದ ಚುನಾವಣೆಯಲ್ಲಿ ವಿವೇಕ್ ಸುಬ್ಬಾರೆಡ್ಡಿ 4804 ಮತಗಳನ್ನು ಪಡೆದು ಅಧ್ಯಕ್ಷ ಹುದ್ದೆಗೇರಿದ್ದಾರೆ.
ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ್ದ ನಿಕಟಪೂರ್ವ ಅಧ್ಯಕ್ಷರಾಗಿದ್ದ ಎ.ಪಿ.ರಂಗನಾಥ್ 2894 ಮತಗಳನ್ನು ಪಡೆದಿದ್ದರೆ, ಆರ್.ರಾಜಣ್ಣ 2548 ಮತಗಳನ್ನು ಪಡೆದಿದ್ದಾರೆ. ಎಚ್.ಸಿ ಶಿವರಾಮು ಅವರು 878 ಮತಗಳನ್ನು ಗಳಿಸಿದ್ದಾರೆ.
ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದವರಲ್ಲಿ ಟಿ.ಜಿ ರವಿ 4ನೇ ಸುತ್ತಿನ ಮತಎಣಿಕೆಯಲ್ಲಿ ಇತರೆ ಅಭ್ಯರ್ಥಿಗಳಿಗಿಂತ 150 ಮತಗಳ ಮುನ್ನೆಡೆ ಕಾಯ್ದುಕೊಂಡಿದ್ದಾರೆ ಎಂದು ಲೀಗಲ್ ನ್ಯೂಸ್ ವರದಿ ಮಾಡಿದೆ.
(ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….