ಬೆಂ.ಗ್ರಾ.ಜಿಲ್ಲೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2021-22ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಕಲಾವಿದರು ಹಾಗೂ ಸಂಘ-ಸಂಸ್ಥೆಗಳಿಂದ ಧನಸಹಾಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ-ಸಂಸ್ಥೆಗಳಿಗೆ, ಅಸಂಘಟಿತ ತಂಡಗಳು/ ಏಕವ್ಯಕ್ತಿ ಕಲಾವಿದರಿಗೆ ವಾದ್ಯ ಪರಿಕರ/ ವೇಷಭೂಷಣ ಖರೀದಿಗೆ, ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ/ ತಂಡದ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಧನಸಹಾಯ ನೀಡಲಾಗುವುದು.
ಈ ಮೂರು ಯೋಜನೆಗಳಿಗಾಗಿ ಧನಸಹಾಯ ಪಡೆಯಲು ಸೇವಾಸಿಂಧು ಪೋರ್ಟಲ್ sevasindhu.karnataka.gov.in ಮುಖಾಂತರ ಅರ್ಜಿ ಸಲ್ಲಿಸಲು 2022 ರ ಜನವರಿ 08 ಕೊನೆಯ ದಿನವಾಗಿದೆ.
ಯೋಜನೆಯ ಮಾರ್ಗಸೂಚಿಗಳನ್ನು ಸೇವಾ ಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‌ಸೈಟ್: www.kannadasiri.karnataka.gov.in ನಲ್ಲಿ ಪಡೆಯಬಹುದು.
ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ದೂ.ಸಂ.: 080-29560059 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಮಂಜುನಾಥ್.ಬಿ.ಆರಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….