ದೊಡ್ಡಬಳ್ಳಾಪುರ: 2020- 21 ನೇ ಸಾಲಿನಲ್ಲಿ ತಾಲ್ಲೂಕಿನ ಶಿಕ್ಷಕರು ಕೋವಿಡ್ 19 ಕಾಂಟ್ಯಾಕ್ಟ್ ಟ್ರೇಸಿಂಗ್ ಕಾರ್ಯದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಹಿನ್ನೆಲೆಯಲ್ಲಿ ಆ ಶಿಕ್ಷಕರಿಗೆ ಗಳಿಕೆ ರಜೆಯನ್ನು ಮುಂಜೂರು ಮಾಡಿಸಿದ್ದ ನಿಕಟಪೂರ್ವ ತಹಶೀಲ್ದಾರ್ ಟಿ.ಎಸ್. ಶಿವರಾಜ್ ಅವರನ್ನು ಅವರ ಸ್ವ ಗೃಹದಲ್ಲಿ ಶಿಕ್ಷಕರ ಸಂಘದಿಂದ ಸನ್ಮಾನಿಸಿ, ಧನ್ಯವಾದ ಸಲ್ಲಿಸಲಾಯಿತು.
ಈ ವೇಳೆ ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಎಂ.ಎಸ್.ರಾಜಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ವಿ.ವಸಂತಗೌಡ ಹಾಗೂ BRP ಎಂ.ಶ್ರೀಕಾಂತ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….