ದೊಡ್ಡಬಳ್ಳಾಪುರ: ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಸೇವೆಯಿಂದ ನಿವೃತ್ತರಾದ ಟಿ.ಮುರುಡಯ್ಯ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುರುಡಯ್ಯ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ವೇಳೆ ತಾಪಂ ಮಾಜಿ ಅಧ್ಯಕ್ಷ ನಾರಾಯಣಗೌಡ, ಇಒ ಮೋಹನ್, ಸಮಾಜ ಕಲ್ಯಾಣ ಇಲಾಖೆಯ ಕೃಷ್ಣಪ್ಪ, ಎಇಇ ಮಂಜುನಾಥ್, ಕಾಂಗ್ರೆಸ್ ಮುಖಂಡರ ಲಕ್ಷ್ಮೀಪತಿ ಸೇರಿದಂತೆ ವಿವಿಧ ಗ್ರಾಮಪಂಚಾಯಿತಿ ಪಿಡಿಒಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….