ಬೆಂಗಳೂರು: ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಡಿಕೆ ಬ್ರದರ್ಸ್ ವಿರುದ್ದ ಕಿಡಿಕಾರಿದ್ದಾರೆ.
ಆಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಡುವಿನ ಮಾತಿನ ಸಮರ ಮುಂದುವರಿದಿದೆ.
ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವಿಟ್ ಮೂಲಕ “ಸಹೋದರರ ಆಟದ ಅಂತ್ಯ ಹತ್ತಿರ ಬಂದಿದೆ” ಎಂದಿದ್ದಾರೆ.
ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ. ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ ಎಂದು ತಿರುಗೇಟು ನೀಡಿದ್ದಾರೆ.
ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ.
ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ.
ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು ಎಂದು ಹೆಚ್ ಡಿಕೆ ಮಾರ್ಮಿಕವಾಗಿ ನುಡಿದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….