ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 15ರಿಂದ 18 ವರ್ಷದೊಳಗಿನವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ದೊರೆತಿದೆ. ಮೊದಲ ದಿನವಾದ ಸೋಮವಾರ 29,425 ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಓಮಿಕ್ರೋನ್ ಸೋಂಕು ಹೆಚ್ಚಾಗುತ್ತಿದ್ದು, ಸಿಎಂ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ.
ಮಾಧ್ಯಮ ಮಿತ್ರರು ಲಾಕ್‌ಡೌನ್ ಅಂತ ಕಠಿಣ ಪದ ಉಪಯೋಗಿಸುವುದು ಬೇಡ. ಈಗ ತಾನೆ ಜನಸಾಮಾನ್ಯರು ಸಹಜ ಸ್ಥಿತಿಗೆ ಮರಳುತ್ತಿದ್ದಾರೆ. ಮತ್ತೆ ಲಾಕ್‌ಡೌನ್ ಹೇರಿದರೆ ಜನರಿಗೆ ತೊಂದರೆಯಾಗುತ್ತದೆ. ಲಾಕ್‌ಡೌನ್ ಬದಲು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸುಧಾಕರ್ ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….