ದೊಡ್ಡಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪಂಜಾಬ್ ನ ಫಿರೋಜ್ ಪುರದಲ್ಲಿ 42,750 ಕೋಟಿ ರೂ ಮೊತ್ತದ ಬಹುಕೋಟಿ ರೂಪಾಯಿಗಳ ಯೋಜನೆಗಳ ಶಂಕುಸ್ಥಾಪನೆಗೆ ತೆರಳುತ್ತಿದ್ದ ವೇಳೆ ಫ್ಲೈಓವರ್ ಬಳಿಯೇ ಪ್ರಧಾನಿ ಬೆಂಗಾವಲು ಪಡೆ ವಾಹನವನ್ನು ಪ್ರತಿಭಟನಾಕಾರರು ತಡೆದ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರದ ಭದ್ರತಾ ಲೋಪ ಎಂಬ ಕುರಿತು ಪರ ವಿರೋಧದ ಚರ್ಚೆ ತೀವ್ರವಾಗಿ ನಡೆಯುತ್ತಿದೆ.
ಈ ಕುರಿತು ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ಹರಿತಲೇಖನಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ಸ್ಥಾನಕ್ಕೆ ಗೌರವ ಸಲ್ಲಿಸಬೇಕಾದ್ದು ಎಲ್ಲರ ಕರ್ತವ್ಯ, ಇಂತಹ ಘಟನೆ ನಡೆದಿರುವುದು ವಿಪರ್ಯಾಸ. ಆದರೆ ಹಲವು ತಿಂಗಳುಗಳ ಕಾಲ ರಸ್ತೆಯಲ್ಲಿ ವನವಾಸದಂತೆ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ ರೈತರ ಆಕ್ರೋಶದ ಕಟ್ಟೆಯೊಡೆದು ಇಂದು ಈ ರೀತಿ ಮೋದಿಯವರಿಗೆ ಆ ನೋವಿನ ಬಿಸಿ ತಟ್ಟಿದೆ.
ಇಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜನರಿಲ್ಲದ ಕಾರಣ ಹಿಂತಿರುಗಿದ್ದಾರೆ ಎನ್ನಬಹುದಾದರು, ಶತೃ ರಾಷ್ಟ್ರದ ಗಡಿ ಸಮೀಪ ದೇಶದ ಪ್ರಧಾನಿಯ ಕಾರನ್ನು ಹಲವು ನಿಮಿಷಗಳ ತಡೆಯುವಂತಹ ಭದ್ರತಾಲೋಪ ಆಗಬಾರದಿತ್ತು ಎಂದು ವೆಂಕಟರಮಣಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….