ದೊಡ್ಡಬಳ್ಳಾಪುರ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಇದೇ 9ರಿಂದ ಹಮ್ಮಿಕೊಂಡಿರುವ ಪಾದಯಾತ್ರೆ ಕುರಿತಂತೆ ನಗರದ ಪ್ರವಾಸಿ ಮಂದಿರದಲ್ಲಿ ಇಂದು (ಜ.6) ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಕೆಪಿಸಿಸಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ನಗರಸಭೆ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆಗೆ ಭರ್ಜರಿ ಸಿದ್ದತೆ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷ ಕಾವೇರಿ ಮತ್ತು ಅರ್ಕಾವತಿ ನದಿಗಳ ಸಂಗಮದಲ್ಲಿ ಇದಕ್ಕಾಗಿ ಬೃಹತ್ ವೇದಿಕೆ ನಿರ್ಮಿಸುತ್ತಿದೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಪಾದಯಾತ್ರೆ ನೇತೃತ್ವ ವಹಿಸಿದ್ದು, ಅದರ ಯಶಸ್ಸಿಗೆ ಶತಾಯಗತಾಯ ಯತ್ನಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಸುಮಾರು 123.5 ಕಿಮೀ ಪಾದಯಾತ್ರೆಯ ರೂಟ್‌ಮ್ಯಾಪ್ ಸಿದ್ದಗೊಂಡಿದೆ.
ಕನಕಪುರ ಸೇರಿದಂತೆ 4 ರಿಂದ 5 ಜಿಲ್ಲೆಗಳ ಕಾರ್ಯಕರ್ತರನ್ನು ಪಾದಯಾತ್ರೆಯಲ್ಲಿ ತೊಡಗಿಸಿಕೊಳ್ಳಲು ನಾಯಕರು ಸಿದ್ಧಗೊಳಿಸಿದ್ದಾರೆ. ನಿತ್ಯ 13 ರಿಂದ 16 ಕಿ.ಮೀ. ದೂರ ಪಾದಯಾತ್ರೆ ನಡೆಯಲಿದೆ. ಪ್ರತಿ 6 ರಿಂದ 8 ಕಿ.ಮೀ. ಅಂತರದಲ್ಲಿ ಊಟ ಮತ್ತು ವಿಶ್ರಾಂತಿಗೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….