ದೊಡ್ಡಬಳ್ಳಾಪುರ: ವಿದೇಶದಿಂದ ಬಂದು ಐಸುಲೇಷನ್ ಆಗಿದ್ದ ಬೆಂಗಳೂರು ಮೂಲದ ಕರೊನಾ ಸೋಂಕಿತ ಪರಾರಿಯಾಗಿರುವ ಘಟನೆ ನಗರದ ಹೊರವಲಯದಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಜ.3ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ 28 ವರ್ಷದ ವ್ಯಕ್ತಿಗೆ ಆರ್ಟಿಪಿಸಿಆರ್ ತಪಾಸಣೆ ವೇಳೆ ಪಾಸಿಟಿವ್ ಬಂದಿದ್ದು, ದೊಡ್ಡಬಳ್ಳಾಪುರ ಬಳಿಯ ಖಾಸಗಿ ಆಸ್ವತ್ರೆಯಲ್ಲಿ ಐಸುಲೇಷನ್ ಮಾಡಲಾಗಿತ್ತು.
ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಲೆ ಸೋಂಕಿತ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಆಸ್ವತ್ರೆ ವೈದ್ಯರು ದೂರು ನೀಡಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….