ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ರಸ್ತೆಯಲ್ಲಿನ ಶ್ರೀ ಅಯ್ಯಪ್ಪ ದೇವಾಲಯಕ್ಕೆ ತಹಶೀಲ್ದಾರ್ ಮೋಹನಕುಮಾರಿ ದಿಢೀರ್ ಭೇಟಿ ನೀಡಿ. ಮಾಲಾಧಾರಿಗಳೊಂದಿಗೆ ಮಾತುಕತೆ ನಡೆಸಿದರು.
ಈ ವೇಳೆ ಹಿರಿಯ ಸ್ವಾಮಿಗಳೊಂದಿಗೆ ಮಾತನಾಡಿದ ಅವರು, ಕೋವಿಡ್ -19 ಮೂರನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯಸರ್ಕಾರ ಹಾಗೂ ಜಿಲ್ಲಾಡಳಿತ ಜಾರಿಗೆ ತಂದಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದರು.
ಸೋಂಕನ್ನು ತಡೆಗಟ್ಟಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಖುವುದು, ಯಾತ್ರೆಗೂ ಮುನ್ನಾ ಮಾಡುವ ಮುನ್ನ ಆರ್ಟಿಪಿಸಿಆರ್ ಟೆಸ್ಟ್ಗೆ ಒಳಪಟ್ಟು ಮತ್ತು ಕೋವಿಡ್ -19 ನೆಗೆಟಿವ್ ಪ್ರಮಾಣ ಪತ್ರ ಪಡೆಯುವುದು.
ಯಾತ್ರೆಯ ನಂತರ 7 ದಿನ ಹೋಂ ಕ್ವಾರಂಟೈನ್ ಇದ್ದು, 8ನೇ ದಿನ ಕೋವಿಡ್-19 ನೆಗೆಟಿವ್ ವರದಿ ನೀಡಲು ಪ್ರತಿಯೊಬ್ಬ ಮಾಲಾಧಾರಿಗಳಿಗೆ ತಿಳಿಸಿ ಕರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸಹಕರಿಸಬೇಕೆಂದು ಮನವಿ ಮಾಡಿದರು.
ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ನಗರಸಭೆ ಸಿಬ್ಬಂದಿ ಹಾಗೂ ಅಯ್ಯಪ್ಪ ಮಾಲಾಧಾರಿಗಳು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….