ಬೆಂ.ಗ್ರಾ.ಜಿಲ್ಲೆ: ಕರೋನಾ ವೈರಸ್ (ಕೋವಿಡ್-19) ಸಾಂಕ್ರಾಮಿಕದ ಹೊಸ ರೂಪಾಂತರ ಹಾವಳಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಲಸಿಕೆ ಪಡೆಯದೇ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಲಸಿಕೆಗಳನ್ನು ನೀಡುವ ಉದ್ದೇಶದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 2022ರ ಜನವರಿ 20ರ ಬೆಳಿಗ್ಗೆ 7 ಗಂಟೆಯಿಂದ ಜನವರಿ 26ರ ವರೆಗೆ ತೀವ್ರ ತರಹದ ಕೋವಿಡ್ -19 ಲಸಿಕಾಕರಣದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಕೋವಿಡ್ ಲಸಿಕೆ ಪಡೆಯದೆ ಇರುವ ಫಲಾನುಭವಿಗಳನ್ನು ನಗರ ಮತ್ತು ಗ್ರಾಮ ಮಟ್ಟದಲ್ಲಿಯೇ ಗುರುತಿಸಿ ಲಸಿಕೆ ನೀಡಲು ಅಗತ್ಯ ಕ್ರಮವಹಿಸಲಾಗಿದೆ.
ಹೋಂ ಐಸೋಲೇಷನ್‌ನಲ್ಲಿರುವ ಕೋವಿಡ್-19 ರೋಗಿಗಳ ಆರೋಗ್ಯ ಕಾಳಜಿ ಮಾಡಲು “ವೈದ್ಯರ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಡಿ, ರೋಗಿಗಳ ಆರೋಗ್ಯ ತಪಾಸಣೆ ಹಾಗೂ ಔಷಧಿಗಳ ಕಿಟ್ ವಿತರಿಸಬೇಕು.
ಕೋವಿಡ್-19ರ ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸಿದ್ದಲ್ಲಿ, ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51 ರಿಂದ 60ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….