ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಗರದ ತಾಲೂಕು ಕಚೇರಿಯಲ್ಲಿ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಮಾಜಿ ಅಧ್ಯಕ್ಷೆ ಪ್ರಮೀಳಾ ಮಹದೇವ್ ಮಾತನಾಡಿ, ವಚನಕಾರ ಚೌಡಯ್ಯ ತಮ್ಮ ವಚನಗಳ ಮೂಲಕ ಸಮಾಜದ ಸುಧಾರಣೆಗೆ ಶ್ರಮಿಸಿದವರು. ಅಸಮಾನತೆ, ಶೋಷಣೆಗಳ ವಿರುದ್ದ ತನ್ನ ವಚನಗಳ ಮೂಲಕ ದನಿ ಎತ್ತಿದ್ದ ಮಹಾಶರಣ ಸಮಾಜದ ಡಾಂಬಿಕತೆಯನ್ನು ತಡೆಯಲು ಯತ್ನಿಸಿದರು. ಅಂಬಿಗರ ಚೌಡಯ್ಯ ಅವರಂತಹ ಮಹಾಮಹಿಮರು ಹಾಕಿಕೊಟ್ಟ ಹಾದಿಯಲ್ಲಿ ಉತ್ತಮ ಸಮಾಜ ನಿರ್ಮಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಉಪಾಧ್ಯಕ್ಷೆ ಫರ್ಹಾನಾ ತಾಜ್, ಉಪತಹಸೀಲ್ದಾರ್ ಸುರೇಶ್, ಕಸಬಾ ಗ್ರಾಮ ಲೆಕ್ಕಿಗ ರಾಜೇಂದ್ರ ಬಾಬು ಹಾಗೂ ಗಂಗಾಮತಸ್ಥ ಸಮುದಾಯದ ಮುಖಂಡರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….