ದೊಡ್ಡಬಳ್ಳಾಪುರ: ಗೋಡೋನ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ, ಗೋಡೋನಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನ ಸುಟ್ಟು ಕರಕಲಾಗಿರುವ ಘಟನೆ ಭುವನೇಶ್ವರಿ ನಗರದಲ್ಲಿ ಸಂಭವಿಸಿದೆ.
ಸಿದ್ಧಲಿಂಗಪ್ಪ ಎನ್ನುವವರಿಗೆ ಸೇರಿದ ಗೋಡೋನ್ ನಲ್ಲಿ ಮೂರು ದ್ವಿಚಕ್ರ ವಾಹನಗಳನ್ನು ನಿಲ್ಲಿಸಿದ್ದು, ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಒಂದು ವಾಹನ ಪೂರ್ಣಪ್ರಮಾಣದಲ್ಲಿ ಸುಟ್ಟಿದ್ದು, ಮತ್ತೆರಡು ವಾಹನಗಳಿಗೆ ಹಾನಿಯಾಗಿದೆ.
ಘಟನೆ ಕುರಿತಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….