ಬೆಂ.ಗ್ರಾ.ಜಿಲ್ಲೆ: “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಅವರ ಹುತಾತ್ಮ ದಿನಾಚರಣೆ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು.
“ಸಂಗೊಳ್ಳಿ ರಾಯಣ್ಣ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಂಜುನಾಥ ಆರಾಧ್ಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕ ರಾಜಸುಲೋಚನ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….