ನವದೆಹಲಿ, (ಆಗಸ್ಟ್ 8): ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕದ ನಿರೀಕ್ಷೆಯಲ್ಲಿದ್ದಾಗಲೇ ತೂಕದ ಕಾರಣ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ನೋವಿನಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಕುರಿತು ಭಾವುಕ ಸಂದೇಶ ಪ್ರಕಟಿಸಿರುವ ಅವರು, ‘ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋಲನುಭವಿಸಿದ್ದೇನೆ’ ಎಂದಿದ್ದಾರೆ.
ಒಲಿಂಪಿಕ್ಸ್‌ನಲ್ಲಿ ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕುಸ್ತಿಪಟು ರೋಚಕವಾಗಿ ಫೈನಲ್‌ಗೆ ಪ್ರವೇಶಿಸಿದ್ದರು. ವಿನೇಶ್ ಫೋಗಟ್ ಖಚಿತವಾಗಿ ಬಂಗಾರ ಗೆಲ್ಲುವ ನಿರೀಕ್ಷೆ ಭಾರತೀಯರಿಗಿತ್ತು. ಆದರೆ, ಪದಕ ಸುತ್ತಿನ ಪಂದ್ಯಕ್ಕೂ ಮುನ್ನ ದೇಹದ ತೂಕದಲ್ಲಿ ಕೇವಲ 100 ಗ್ರಾಂ ಅಧಿಕವಿದ್ದ ಕಾರಣದಿಂದ, ಫೈನಲ್‌ನಿಂದ ಅನರ್ಹಗೊಳಿಸಲಾಯಿತು. ಇದಾದ ಒಂದು ದಿನದಲ್ಲೇ ಅವರು ನಿವೃತ್ತಿ ಘೋಷಣೆ ಮಾಡಿದ್ದಾರೆ.
ವಿನೇಶ್ ಫೋಗಟ್ ಭಾವುಕ ಟ್ವಿಟ್: ‘ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ಬರೆದುಕೊಂಡಿದ್ದಾರೆ.
ಕುಸ್ತಿಗೆ ವಿದಾಯ. ನಿಮ್ಮೆಲ್ಲರಿಗೂ ನಾನು ಸದಾ ಋಣಿಯಾಗಿರುತ್ತೇನೆ, ಕ್ಷಮಿಸಿ ಎಂದು ವಿನೇಶ್ ಫೋಗಟ್ ಟ್ವಿಟರ್ ಸಂದೇಶದಲ್ಲಿ ಬರೆದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….