ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಡಿಕೆ ಶಿವಕುಮಾರ್ ಮಹತ್ವದ ಸೂಚನೆ!

ಬೆಂಗಳೂರು, (ಆಗಸ್ಟ್.17); ಮುಡಾ ಹಗರಣದ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಇಡೀ ರಾಜ್ಯದ್ಯಾಂತ ಕಾಂಗ್ರೆಸ್ ಹೋರಾಟದ ಕಿಚ್ಚು ಭುಗಿಲೆದ್ದಿದೆ.

ರಾಜ್ಯಪಾಲರ ಈ ನಡೆ ವಿರೋಧಿಸಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಇದೇ ಆ.19ರಂದು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಮಹತ್ವದ ಆದೇಶ ಹೊರಡಿಸಿ, ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಮಾಡಿದ್ದೇವೆ. ರಾಜ್ಯಪಾಲರು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವಕ್ಕೆ ಮಾರಕವಾದ ಪತ್ರ ಕಳುಹಿಸಿದ್ದಾರೆ. 

ರಾಜ್ಯಪಾಲರ 26.7.2024ರ ನೋಟಿಸ್ ಸಂಬಂಧ ಏಪ್ರಿಲ್ 1ರಂದು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದೇವೆ. ಆ ದೂರಿನಲ್ಲಿ ತಿರುಳು ಇಲ್ಲ. ಸಂವಿಧಾನದ ಅಂಶಗಳನ್ನು ತಿಳಿ ತಿಳಿಯಾಗಿ ಹೇಳಿದ್ದೇವೆ. ಇದು ರಾಜಕೀಯ ಪಿತೂರಿ. ಮುಡಾ ಪ್ರಕರಣದಲ್ಲಿ ಯಾವುದೇ ಲೋಪದೋಷ ಆಗಿಲ್ಲ ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ. 

ಸರ್ಕಾರ ರಾಜ್ಯಪಾಲರ ಕೈ ಕೆಳಗೆ ಕೆಲಸ ಮಾಡುತ್ತದೆ. ಸಂವಿಧಾನದ ಮೌಲ್ಯ ಎತ್ತಿ ಹಿಡಿಯಬೇಕು ಎಂದು ನಾವು ಕೆಲಸ ಮಾಡುತ್ತಿದ್ದೇವೆ. ಇಂದು ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಪತ್ರ ಕಳುಹಿಸಿದ್ದಾರೆ. ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡಬೇಕಾದರೆ ಪ್ರಕರಣದ ಸಂಬಂಧ ತನಿಖೆ ನಡೆಸಿ, ತನಿಖೆಯ ರಿಪೋರ್ಟ್ ಬಂದಿದ್ದರೆ ಅನುಮತಿ ನೀಡಬಹುದಾಗಿತ್ತು. 

ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಲೋಕಾಯುಕ್ತದಲ್ಲಿ ತನಿಖೆ ನಡೆದಿದೆ. ಅವರ ವಿರುದ್ಧ ಲೋಕಾಯುಕ್ತ, ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಅನುಮತಿ ಕೋರಿ ಮನವಿ ಮಾಡಿದ್ದಾರೆ. ಅಕ್ರಮ ಗಣಿಗಾರಿಕೆ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಮನವಿ ಸಲ್ಲಿಸಿದ್ದರು.

ಜನಾರ್ದನ ರೆಡ್ಡಿ, ಜೊಲ್ಲೆ, ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಲಾಗಿತ್ತು. ಅದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆದರೆ ಈ ಪ್ರಕರಣದಲ್ಲಿ ದೂರು ಬಂದ ಒಂದೇ ದಿನದಲ್ಲಿ ರಾಜ್ಯಪಾಲರು ನೋಟಿಸ್ ಕಳುಹಿಸಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 136 ಶಾಸಕರ ಬಲದ ಮತ್ತು ರಾಜ್ಯದ ಜನರ ವಿರುದ್ಧದ ತೀರ್ಮಾನವಾಗಿದೆ. 

ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡುತ್ತಿದ್ದಾರೆ. ಜೋಶಿ, ಕುಮಾರಸ್ವಾಮಿ ಈ ಸರ್ಕಾರ ಬೀಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಅದಕ್ಕೆ ಪೂರಕವಾಗಿ ಈ ಪೂರ್ವಾನುಮತಿ ನೀಡಲಾಗಿದೆ. ಇಡೀ ಸಂಪುಟ ಸಚಿವರು ಸಿಎಂ ಬೆನ್ನಿಗೆ ನಿಂತಿದ್ದಾರೆ. 

ಪಕ್ಷವೂ ಸಿಎಂ ಬೆನ್ನಿಗೆ ನಿಂತಿದೆ. ಯಾವುದೇ ಪ್ರಕರಣ ಇಲ್ಲ. ಅದರೂ ಸಿಎಂ ಮೇಲೆ ಕೇಸ್ ಮಾಡಿದ್ದಾರೆ. ಕಾನೂನು ರೀತಿಯ ಹೋರಾಟ ಮಾಡುತ್ತೇವೆ. ರಾಜಕೀಯವಾಗಿಯೂ ಹೋರಾಟ ಮಾಡುತ್ತೇವೆ. ಈ ಪ್ರಾಸಿಕ್ಯೂಷನ್ ಕಾನೂನಿಗೆ ವಿರುದ್ಧವಾಗಿದೆ ಎಂದು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್‌ ಜಾರಿ..!: RobinUthappa

ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್‌ ಜಾರಿ..!: RobinUthappa

ರಾಬಿನ್ ಉತ್ತಪ್ಪ ಪುಲಕೇಶಿ ನಗರ ಠಾಣೆ ವ್ಯಾಪ್ತಿಯ ನಿವಾಸಿ ಆಗಿರುವುದರಿಂದ ಅವರನ್ನು ಬಂಧಿಸುವಂತೆ ಇಪಿಎಫ್ ರಿಜಿನಲ್ ಕಮಿಷನರ್ ಷಟಾಕ್ಷರಿ ಗೋಪಾಲರೆಡ್ಡಿ ಎಂಬುವರು ಪೊಲೀಸರಿಗೆ ಪತ್ರ ಬರೆದಿದ್ದಾರೆ. RobinUthappa

[ccc_my_favorite_select_button post_id="99224"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]