ಮುಂಬೈ, (ಆಗಸ್ಟ್.23): ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ದೇಶಾದ್ಯಂತ ಜನರಲ್ಲಿ ಆಕ್ರೋಶ ಭುಗಿಲೆದ್ದಿದೆ.
ಈ ಪ್ರಕರಣದಲ್ಲಿ ಆರೋಪಿಯಿಂದ ಹಿಡಿದು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ವರೆಗೆ ದಿನಕ್ಕೊಂದು ಹೊಸ ಹೊಸ ಸಂಗತಿಗಳು ಬಹಿರಂಗವಾಗುತ್ತಿವೆ.
ಇದರ ಬೆನ್ನಲ್ಲೆ ಕೋಲ್ಕತ್ತಾದಲ್ಲಿ ಹುಡುಗಿಗೆ ಏನಾಯಿತು? ಅದೇ ರೀತಿ ನಾನು ನಿಮಗೆ ಮಾಡುತ್ತೇನೆ ಎಂದು ಶಾಲೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಆಟೋ ರಿಕ್ಷಾ ಚಾಲಕ ಬೆದರಿಕೆ ಹಾಕಿದ್ದಾನೆ. ಇದರಿಂದ ಕೆರಳಿದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಸ್ಥಳೀಯರು ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ನಾಗುರದ ಪಾರ್ಡಿ ಪೊಲೀಸ್ ಠಾಣೆ ಬಳಿ ನಡೆದಿದೆ.
ಮೂಲಗಳ ಪ್ರಕಾರ, ಇಬ್ಬರು ವಿದ್ಯಾರ್ಥಿಗಳು ಆಟೋದಲ್ಲಿ ಪ್ರಯಾಣಿಸುತ್ತಿದ್ದರು ಮತ್ತು ಜೋರಾಗಿ ಸಂಭಾಷಣೆಯಲ್ಲಿ ತೊಡಗಿದ್ದರು. ಚಾಲಕನು ಅವರ ಧ್ವನಿಯನ್ನು ಕಡಿಮೆ ಮಾಡಲು ಕೇಳಿದನು, ಇದು ಬಿಸಿಯಾದ ವಿನಿಮಯಕ್ಕೆ ಕಾರಣವಾಗಿದೆ. ವಾಗ್ವಾದ ತಾರಕಕ್ಕೇರುತ್ತಿದ್ದಂತೆ ಚಾಲಕ, ‘ಕೋಲ್ಕತ್ತಾದಲ್ಲಿ ಬಾಲಕಿಗೆ ಏನಾಗಿದೆಯೋ ಅದನ್ನೇ ನಿನಗೆ ಮಾಡುತ್ತೇನೆ’ ಎಂದು ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಚಾಲಕನ ಬೆದರಿಕೆಯಿಂದ ಆಘಾತಕ್ಕೊಳಗಾದ ವಿದ್ಯಾರ್ಥಿನಿಯರು ಚಾಲಕನನ್ನು ಆಟೋ ನಿಲ್ಲಿಸಲು ಒತ್ತಾಯಿಸಿದ್ದಾರೆ. ಅದಾದ ಬಳಿಕ ಚಾಲಕನನ್ನು ವಾಹನದಿಂದ ಹೊರಗೆಳೆದು ಹಲ್ಲೆ ಮಾಡಲು ಪ್ರಾರಂಭಿಸಿದ್ದಾರೆ.
ಈ ವೇಳೆ ಸ್ಥಳೀಯರು ಮಧ್ಯಪ್ರವೇಶಿಸಿದ್ದಾರೆ. ನಡೆದ ಘಟನೆಯನ್ನು ತಿಳಿದ ಸ್ಥಳೀಯರು, ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಚಾಲಕ ಕ್ಷಮೆ ಕೇಳಿದ ನಂತರವೇ ಪರಿಸ್ಥಿತಿ ಶಾಂತವಾಗಿದೆ.
ಈ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….