ಪುಣೆ, (ಆಗಸ್ಟ್ .24); ಹವಾಮಾನ ವೈಪರೀತ್ಯದ ಕಾರಣ ನಾಲ್ವರು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನವಾದ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪೌಡ್ ಪ್ರದೇಶದಲ್ಲಿ ಇಂದು ಸಂಭವಿಸಿದೆ.
ಘಟನೆಯಲ್ಲಿ ಪೈಲೆಟ್ ಸೇರಿದಂತೆ ಇನ್ನು ಮೂವರು ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವೇಳೆ ಓರ್ವ ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಮುಂಬೈ ಮೂಲದ ಗ್ಲೋಬಲ್ ಕಂಪನಿಗೆ ಸೇರಿದ AW-139 ಮಾಡೆಲ್ ಹೆಲಿಕಾಪ್ಟರ್ ಇದಾಗಿದ್ದು ಮುಂಬೈ ಜುಹುದಿಂದ ವಿಜಯವಾಡಕ್ಕೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಭಾರೀ ಮಳೆ, ಗಾಳಿಯಿಂದಾಗಿ ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ಪ್ರಕಾರ ಅಂದಾಜಿಸಲಾಗಿದೆ.
ಹೆಲಿಕಾಪ್ಟರ್ ಪತನಕ್ಕೆ ಯಾವುದೇ ತಾಂತ್ರಿಕ ದೋಷದ ಕಾರಣಗಳು ಈವರೆಗೂ ದೃಢಪಟ್ಟಿಲ್ಲ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹೆಲಿಕಾಪ್ಟರ್ ಪತನಗೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….