ಬೆಂಗಳೂರು, (ಜೂ.23); ಕೈಗಾರಿಕಾ ಪ್ರದೇಶ ಸ್ಥಾಪಿಸಲು ಮುಂದಾಗಿರುವ ರಾಜ್ಯ ಸರ್ಕಾರದಿಂದ ಅವೈಜ್ಞಾನಿಕ ಬೆಲೆ ನಿಗದಿ ಕುರಿತು ತಾಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿ ನಾರಾಯಣ ಹೊಸಹಳ್ಳಿ ವ್ಯಾಪ್ತಿಯ ರೈತರು ಇಂದು ಜೆಡಿಎಸ್ ಮುಖಂಡ ಹರೀಶ್ ಗೌಡ ನೇತೃತ್ವದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಜೆಪಿ ನಗರದ ಕುಮಾರಸ್ವಾಮಿ ಅವರ ನಿವಾಸದಲ್ಲಿ ಭೇಟಿಯಾದ ರೈತರು, ಈ ಮುಂಚೆ ಕುಮಾರಸ್ವಾಮಿ ಅವರ ಸೂಚನೆಯಂತೆ ಸಚಿವ ಎಂಬಿ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ KIADB ಅಧಿಕಾರಿಗಳು ಹಾಗೂ ರೈತರ ಸಭೆಯಲ್ಲಿ ನಡೆದ ವಿಚಾರವನ್ನು ವಿವರಿಸಿದರು.
ಈ ವೇಳೆ ಮಾತನಾಡಿದ ಕುಮಾರಸ್ವಾಮಿ ಅವರು, ರೈತರು ಒಗ್ಗಟ್ಟಿನ ಹೋರಾಟ ಮುಂದವರಿಸುವಂತೆ ಸೂಚಿಸಿದ್ದು, ಈ ವಿಚಾರ ನೆನಪಿನಲ್ಲಿದ್ದು, ರೈತರಿಗೆ ನ್ಯಾಯಯುತ ಪರಿಹಾರ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ರೈತ ಮುಖಂಡರಾದ ಆನಂದ್, ರಮೇಶ್, ನರಸಿಂಹಮೂರ್ತಿ, ರಾಮೇಗೌಡ, ಶ್ರೀನಿವಾಸ್ ಮೂರ್ತಿ, ಶಾಂತಿನಗರ ಪ್ರವೀಣ್ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….