ಬೆಂಗಳೂರು, (ಜೂ.01): ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆಯಾಗುವ ಚುನಾವಣೆಗೆ ಕಾಂಗ್ರೆಸ್ ಅಳೆದು ತೂಗಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಇದೇ ಜೂನ್ 13ಕ್ಕೆ ಮತದಾನ ನಡೆಯಲಿದ್ದು, ಎಂಎಲ್‌ಸಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 03 ಅಂದ್ರೆ ನಾಳೆಯೇ ಕೊನೆಯ ದಿನವಾಗಿದೆ.
- ಎನ್.ಎಸ್ ಬೋಸರಾಜು
- ವಸಂತ ಕುಮಾರ್
- ಡಾ. ಯತಿಂದ್ರ ಸಿದ್ದರಾಮಯ್ಯ
- ಕೆ. ಗೋವಿಂದ ರಾಜು
- ಐವಾನ್ ಡಿಸೋಜ
- ಬಿಲ್ಕಿಸ್ ಬಾನೂ
- ಜಗದೇವ್ ಗುತ್ತೇದಾರ್
ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಹೊಂದಿರುವ ಸಂಖ್ಯಾಬಲದ ಆಧಾರದಲ್ಲಿ 7 ಪರಿಷತ್ ಸದಸ್ಯ ಸ್ಥಾನವನ್ನು ಗೆಲ್ಲಬಹುದಾಗಿದೆ. ಹೀಗಾಗಿ ವಿಧಾನಪರಿಷತ್ ಚುನಾವಣೆಗೆ 7 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಇದರ ಜೊತೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಿದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷ ಉಪಚುನಾವಣೆಯ ಅಭ್ಯರ್ಥಿಯಾಗಿ ಬಸವನಗೌಡ ಬದರ್ಲಿ ಅವರನ್ನು ಆಯ್ಕೆ ಮಾಡಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….