ಕೆಜಿಎಫ್, (ಜ.19): ಅಯೋಧ್ಯೆ ಶ್ರೀ ರಾಮನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಜಿಎಫ್ ತಾಲ್ಲೂಕಿನ ಸುಂದರಪಾಳ್ಯ ಗ್ರಾಮದ ಇಬ್ಬರು ಯುವಕರು ಇನ್‌ಸ್ಟಾಗ್ರಾಂನಲ್ಲಿ ರಾಮನನ್ನು ಅವಹೇಳನ ಮಾಡಿದ್ದಾರೆ. ಒಬ್ಬರು ಪೋಸ್ಟ್ ಮಾಡಿದರೆ, ಮತ್ತೊಬ್ಬರು ಟ್ಯಾಗ್ ಮಾಡಿದ್ದಾರೆ ಎಂದು ಸ್ಥಳೀಯರು ಬೇತಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನಲೆ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….