ಚಿಕ್ಕಮಗಳೂರು, (ಫೆ.08): ಚಕ್ರವರ್ತಿ ಸೂಲಿಬೆಲೆ ಭಾಷಣದ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ ಘಟನೆ ವಿಜಯಪುರದಲ್ಲಿ ನಡೆದಿದೆ.
ಇಂದು ನಮೋ ಬ್ರಿಗೇಡ್ ಆಯೋಜಿಸಿದ್ದ ನಮೋ ಭಾರತ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶನಕ್ಕೆ ಯತ್ನಿಸಿದ್ದಾರೆ. ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಿದ್ದು ಪುಂಗಿದಾಸ ಚಕ್ರವರ್ತಿ ಎಂದು ಘೋಷಣೆ ಕೂಗಿದ್ದಾರೆ. ಇದರಿಂದಾಗಿ ನಮೋ ಭಾರತ್ ಕಾರ್ಯಕ್ರಮ ಉದ್ವಿಗ್ನತೆ ಸ್ವರೂಪ ಪಡೆದಿತ್ತು. ಸುಲಿಬೆಲೆ ಕೆಲಕಾಲ ಭಾಷಣವನ್ನು ನಿಲ್ಲಿಸಿದರು.
ಏಕಾಏಕಿ ಕಾರ್ಯಕ್ರಮಕ್ಕೆ ಎರಡು ತಂಡವಾಗಿ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಇದರಿಂದ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರಿದ್ದ ಕಟ್ಟಡದ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸರು ಬಂದೋಬಸ್ತ್ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….